Thursday, May 2, 2013

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು

ಸಾಹಿತ್ಯ : ಆರ್.ಎನ್. ಜಯಗೋಪಾಲ್
ಸಂಗೀತ : ವಿಜಯಭಾಸ್ಕರ್
ಗಾಯನ : ಬಿ.ಕೆ. ಸುಮಿತ್ರ



ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು
ಚಿಕ್ಕವ್ವ....ಚಿಕ್ಕವ್ವ.....ಎನ್ನುತ ತನ್ನಾ ಗೆಳೆಯರ ಕರೆದಿತ್ತು
ಅದ ಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ದೂರದ ಗುಡಿಯಲಿ ಪೂಜೆಯ ವೇಳೆಗೆ
ಘಂಟೆಯು ಮೊಳಗಿತ್ತು
ಟಣ್ ಡಣ್ ಟಣ್ ಡಣ್
ಎನ್ನುತ ಸೇವೆಗೆ ಎಲ್ಲರ ಕರೆದಿತ್ತು
ಅದಕೇಳಿ ನಾ ಮೈಮರೆತೆ
ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು...

ಹರಿಯುವ ನದಿಯಾ ನೋಡುತ ನಿಂತೆ
ಅಲೆಗಳು ಕುಣಿದಿತ್ತು
ಕಲ ಕಲ ಕಲ ಕಲ......
ಮಂಜುಳ ನಾದವು ಕಿವಿಗಳ ತುಂಬಿತ್ತು
ಅದಕೇಳಿ ನಾ ಮೈ ಮರೆತೆ
ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು...

2 comments:

Badarinath Palavalli said...
This comment has been removed by the author.
Badarinath Palavalli said...

ಒಂದು ಉತ್ತಮ ಗೀತೆ ನೆನೆಸಿದ್ದು ಖುಷಿಯಾಯಿತು.

ಸುಮಿತ್ರಮ್ಮ ಅಪ್ಪಟ ಕನ್ನಡ ಗಾಯಕಿ.

ನನಗೆ ತಿಳಿದ ಮಟ್ಟಿಗೆ ಈ ಚಿತ್ರದ ಛಾಯಾಗ್ರಾಹಕರು ಬಸವರಾಜ್.

http://www.badari-poems.blogspot.in/