ರಚನೆ: ಚಂದ್ರಶೇಖರ ಪಾಟೀಲ
ಸಂಗೀತ: ಸಿ. ಅಶ್ವಥ್
ಹಿನ್ನಲೆ ಗಾಯನ: ಸಿ. ಅಶ್ವಥ್
ಎಲ್ಲೋ ಹುಟ್ಟಿ ಎಲ್ಲೋ ಬೆಳೆದು
ಒಳಗೊಳಗೇ ಹರಿಯುವವಳು
ಜೀವ ಹಿಂಡಿ ಹಿಪ್ಪೆ ಮಾಡಿ
ಒಳಗೊಳಗೇ ಕೊರೆಯುವವಳು ಸದಾ…
ಗುಪ್ತಗಾಮಿನಿನನ್ನ ಶಾಲ್ಮಲಾ
ಹಸಿರು ಮುರಿವ ಎಲೆಗಳಲ್ಲಿ
ಬಸಿರ ಬಯಕೆ ಒಸರುವವಳು
ತುಟಿ ಬಿರಿಯುವ ಹೂಗಳಲ್ಲಿ
ಬೆಂಕಿ ಹಾಡು ಉಸುರುವವಳು ಸದಾ…
ತಪ್ತಕಾಮಿನಿ ನನ್ನ ಶಾಲ್ಮಲಾ
ಎಲ್ಲೋ ಹುಟ್ಟಿ ಎಲ್ಲೋ ಬೆಳೆದು...
ಭೂಗರ್ಭದ ಮೌನದಲ್ಲಿ
ಜುಂಮೆನುತ ಬಳುಕುವವಳು
ಅರಿವಿಲ್ಲದೆ ಮೈಯ ತುಂಬಿ
ಕನಸಿನಲ್ಲಿ ತುಳುಕುವವಳು ಸದಾ..
ಸುಪ್ತಮೋಹಿನಿ ನನ್ನ ಶಾಲ್ಮಲಾ
ಎಲ್ಲೋ ಹುಟ್ಟಿ ಎಲ್ಲೋ ಬೆಳೆದು...
ನನ್ನ ಬದುಕ ಭುವನೇಶ್ವರಿ
ನನ್ನ ಶಾಲ್ಮಲಾ
ನನ್ನ ಹೃದಯ ರಾಜೇಶ್ವರಿ
ನನ್ನ ಶಾಲ್ಮಲಾ ಸದಾ…
ಗುಪ್ತಗಾಮಿನಿ ನನ್ನ ಶಾಲ್ಮಲಾ
ಎಲ್ಲೋ ಹುಟ್ಟಿ ಎಲ್ಲೋ ಬೆಳೆದು...
Wednesday, June 13, 2007
Subscribe to:
Post Comments (Atom)
No comments:
Post a Comment