Saturday, September 11, 2010

ಗುಡಿಯ ನೋಡಿರಣ್ಣಾ

ಚಿತ್ರ: ಸಂತ ಶಿಶುನಾಳ ಶರೀಫ
ಸಾಹಿತ್ಯ: ಶಿಶುನಾಳ ಷರೀಫ್
ಸಂಗೀತ: ಸಿ.ಅಶ್ವಥ್
ಹಿನ್ನಲೆ ಗಾಯನ: ಸಿ.ಅಶ್ವಥ್



ಗುಡಿಯ ನೋಡಿರಣ್ಣಾ
ದೇಹದ ಗುಡಿಯ ನೋಡಿರಣ್ಣಾ

ಗುಡಿಯ ನೋಡಿರಿದು
ಪೊಡವಿಗೆ ಒಡೆಯನು
ಆಡಗಿಕೊಂಡು ಕಡುಬೆಡಗಿನೊಳಿರುತಿಹ
ಗುಡಿಯ ನೋಡಿರಣ್ಣಾ

ಮೂರು ಮೂಲೆಯ ಕಲ್ಲು ಅದರೊಳು
ಜಾರುತಿರುವ ಕಲ್ಲು
ಧೀರ ನಿರ್ಗುಣನು ಸಾರ ಸಗುಣದಲಿ
ತೋರಿ ಅಡಗಿ ತಾ ಬ್ಯಾರ್ಯಾಗಿರುತಿಹ
ಗುಡಿಯ ನೋಡಿರಣ್ಣಾ ದೇಹದ ಗುಡಿಯ ನೋಡಿರಣ್ಣಾ...

ಆರು ಮೂರು ಕಟ್ಟಿ ಮೇಲಕೆ
ಏರಿದನು ಘಟ್ಟಿ
ಭೇರಿ ಕಾಳಿ ಶಂಖ
ಭಾರಿ ಸುನಾದದಿ
ಮೀರಿದಾನಂದ ತೋರಿ ಹೊಳೆಯುತಿಹ
ಗುಡಿಯ ನೋಡಿರಣ್ಣಾ ದೇಹದ ಗುಡಿಯ ನೋಡಿರಣ್ಣಾ...

ಸಾಗುತಿಹವು ದಿವಸ ಬಹುದಿನ
ಹೋಗಿ ಮಾಡಿ ಪಾಯ್ಸ
ಯೋಗಿ ರಾಜ ಶಿಶುನಾಳಧೀಶ ತಾ—
ನಾಗಿ ಪರಾತ್ಪರ ಬ್ರಹ್ಮರೂಪನಿಹ
ಗುಡಿಯ ನೋಡಿರಣ್ಣಾ ದೇಹದ ಗುಡಿಯ ನೋಡಿರಣ್ಣಾ...

1 comment:

Badarinath Palavalli said...

ಗುಡಿಯ ನೋಡಿರಿದು
ಪೊಡವಿಗೆ ಒಡೆಯನು
ಆಡಗಿಕೊಂಡು ಕಡುಬೆಡಗಿನೊಳಿರುತಿಹ
ಗುಡಿಯ ನೋಡಿರಣ್ಣಾ

This is how Sharif Saheb wins the poetical values